ತಾನು ‘ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ’ ಎಂದ ರಾಮಲಿಂಗಾರೆಡ್ಡಿ


22-05-2018 441

ಬೆಂಗಳೂರು: ನಗರದ ಹಿಲ್ಟನ್ ಹೊಟೇಲ್ ನಲ್ಲಿ ಬೀಡು ಬಿಟ್ಟಿರುವ ಕಾಂಗ್ರೆಸ್ ಶಾಸಕರೊಂದಿಗೆ ಕಾಂಗ್ರೆಸ್ ಮುಖಂಡರು ಹಲವು ಸಭೆಗಳನ್ನು ನಡೆಸುತ್ತಿದ್ದಾರೆ. ಮಾಜಿ ಸಚಿವ ರಾಮಲಿಂಗಾರೆಡ್ಡಿ ಶಾಸಕರ ಭೇಟಿ ಬಳಿಕ ಮಾತನಾಡಿದ್ದು, ನಾಳೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೆಚ್.ಡಿ ಕುಮಾರ ಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಸಲಿದ್ದಾರೆ, ಇದರ ತಯಾರಿ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಆದರೆ, ಸಭೆಯಲ್ಲಿ ಸಚಿವರ ಪ್ರಮಾಣ ವಚನ, ಡಿಸಿಎಂ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ, ಪ್ರಮಾಣ ವಚನಕ್ಕೆ ಇನ್ನು ಸಮಯವಿದ್ದು, ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದೇ ವೇಳೆ ‘ತಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ’ ಇದರ ತೀರ್ಮಾನ ಪಕ್ಷಕ್ಕೆ ಬಿಟ್ಟದ್ದು ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Ramalinga Reddy sonia Gandhi ಹೈಕಮಾಂಡ್ ಆಕಾಂಕ್ಷಿ