ಡಿಸಿಎಂ: ಕೆಪಿಸಿಸಿ ಅಲ್ಪಸಂಖ್ಯಾತ ಪದಾಧಿಕಾರಿಗಳ ಒತ್ತಾಯ!


22-05-2018 494

ಬೆಳಗಾವಿ: ಇನ್ನೇನು ನಾಳೆ ರಾಜ್ಯದ ಮುಖ್ಯ ಮಂತ್ರಿಯಾಗಿ ಹೆಚ್.ಡಿ ಕುಮಾರ ಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಸಂಪುಟ ಸಚಿವ, ಡಿಸಿಎಂ, ಇನ್ನಿತರ ಮೇಲ್ದರ್ಜೆಯ ಅಧಿಕಾರಕ್ಕಾಗಿ ಲಾಭಿ ಶುರುವಾಗಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಲು ಒತ್ತಾಯ ಮಾಡಲಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಬೆಳಗಾವಿಯ ಚಿಕ್ಕೋಡಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಶಾಸಕ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಡೊಂಗರಗಾಂವ, ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟದಲ್ಲಿ ತಮ್ಮ ಸಮುದಾಯಕ್ಕೆ ಡಿಸಿಎಂ ಹುದ್ದೆಯೊಂದಿಗೆ ಇಬ್ಬರಿಗೆ ಕ್ಯಾಬಿನೆಟ್ ಸ್ಥಾನ ನೀಡಲು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

press meet Minority ಸಮುದಾಯ ಸಂಪುಟ