ಸಾಲಮನ್ನಾ: ‘ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿ’


23-05-2018 524

ಬೆಂಗಳೂರು: ‘ಸಾಲಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ? 37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ? ಎಂದು ಜೆಡಿಎಸ್ ವರಿಷ್ಠ ಹಾಗು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪ್ರಶ್ನಿಸಿದ್ದಾರೆ. ಸಾಲ ಮನ್ನಾ ಕುರಿತು ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ಪಕ್ಷದ ಅಧ್ಯಕ್ಷ ಅನ್ನೋದಕ್ಕಿಂತ ಹೆಚ್ಚಾಗಿ ತಂದೆ ತಾಯಿಗಳಾಗಿ ಕುಮಾರ ಸ್ವಾಮಿಗೆ ಅರ್ಶಿವಾದ ಮಾಡುತ್ತಿದ್ದೇವೆ, ಇದು ತಂದೆ-ತಾಯಿಗಳಾದ ನಮ್ಮ ಕರ್ತವ್ಯ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಬರದಂತೆ ನೋಡಿಕೊಳ್ಳಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಇದ್ದಾರೆ, ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ನೂತನ ಸಿಎಂ ಕುಮಾರಸ್ವಾಮಿಗೆ ಸಲಹೆ ನೀಡಿರುವುದಾಗಿಯೂ ತಿಳಿಸಿದರು. ಇಂದು ವಿವಿಧ ರಾಜ್ಯಗಳಿಂದ ಪ್ರಾದೇಶಿಕ ಪಕ್ಷಗಳ ನಾಯಕರು ರಾಜ್ಯಕ್ಕೆ ಬಂದಿದ್ದಾರೆ. ತೃತೀಯ ರಂಗದ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದರು.


ಒಂದು ಕಮೆಂಟನ್ನು ಬಿಡಿ