ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ!


24-05-2017 333

ನವದೆಹಲಿ:- ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ಧಾರೆ. ದೆಹಲಿಯ ಪ್ರಧಾನಿಯವರ ನಿವಾಸದಲ್ಲಿ ಭೆಟಿಯಾಗಲಿರುವ ಬ್ಯಾನರ್ಜಿಯವರು ರಾಷ್ಟ್ರಪತಿ ಚುನಾವಣೆಯ ಕುರಿತು ಚರ್ಚಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಕೇಂದ್ರ ಮತ್ತು ರಾಜ್ಯಗಳ ಸಂಭಂಧ ಕುರಿತಂತೆ ಹಾಗೂ ಕೇಂದ್ರದಿಂದ ಪಶ್ಚಿಮ ಬಂಗಾಳಕ್ಕೆ ನೀಡಬೇಕಿರುವ ಅನುದಾನಗಳ ಬಗ್ಗೆಯ ಚರ್ಚಿಸುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.  


ಒಂದು ಕಮೆಂಟನ್ನು ಬಿಡಿ