ಅಗಲಿದ ನಾಯಕನಿಗೆ ಗಣ್ಯರ ಸಂತಾಪ...


28-05-2018 506

ಬಾಗಲಕೋಟೆ: ಕಾಂಗ್ರೆಸ್ ಹಿರಿಯ ಶಾಸಕ ಸಿದ್ದು ನ್ಯಾಮಗೌಡ(70) ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ. ರಾಜ್ಯ ರಾಜಕೀಯದಲ್ಲಿ ರಾಜ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. 2013 ಹಾಗೂ 2018ರಲ್ಲಿ ಜಮಖಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿದ್ದ ಸಿದ್ದು ನ್ಯಾಮಗೌಡ 1991ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಪಿ.ವಿ.ನರಸಿಂಹ ರಾವ್ ಸಂಪುಟದಲ್ಲಿ ಕೇಂದ್ರ ಕಲ್ಲಿದ್ದಲು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೃಷ್ಣ ತೀರ ರೈತ ಸಂಘದ ಮೂಲಕ ರೈತ ಪರ ಕಾರ್ಯಕ್ಕೆ ಖ್ಯಾತಿ ಪಡೆದಿದ್ದರು.

ಶಾಸಕ ಸಿದ್ದು ನ್ಯಾಮಗೌಡ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸರಳ ಸಜ್ಜನಿಕೆಯ ಶಾಸಕ, ಜನಪರ ಹೋರಾಟಗಾರ, ರೈತರ ಬಗ್ಗೆ ಅತೀವ ಕಾಳಜಿಯಿದ್ದ ನಾಯಕ. ಕಾಂಗ್ರೆಸ್ ನ ಹಿರಿಯ ನಾಯಕ ಅಗಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ವಯಕ್ತಿಕವಾಗಿ ತುಂಬಲಾರದ ನಷ್ಟವಾಗಿದೆ ಎಂದು ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ. ಸಿದ್ದು ನ್ಯಾಮಗೌಡರ ಕುಟುಂಬಕ್ಕೆ ದು:ಖ ಭರಿಸುವಂತಹ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಕಾಂಗ್ರೆಸ್ ಹಿರಿಯ ಶಾಸಕ ಸಿದ್ದು ನ್ಯಾಮಗೌಡ ನಿಧನಕ್ಕೆ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ನ್ಯಾಮಗೌಡ ಅಪಘಾತದಿಂದ ಮರಣ ಹೊಂದಿರುವುದು ದುರಾದೃಷ್ಟಕರ, ಅವರ ಅಗಲಿಕೆ ಬಹಳ ನೋವು ತಂದಿದೆ, ದೇವರು ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

yeddyurappa G.Parameshwara ಅಕಾಲಿಕ ಸೋಲಿಸಿದ್ದ