ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾಗ್ವಾದ!


28-05-2018 397

ದಾವಣಗೆರೆ: ಜಿಲ್ಲೆಯ ಹಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ರೈತರ ಸಾಲಮನ್ನಾಗೆ ಆಗ್ರಹಿಸಿ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿರುವ ಬಿಜೆಪಿ ಹಲವೆಡೆ ಪ್ರತಿಭಟನೆ ನಡೆಸುತ್ತಿದೆ. ದಾವಣಗೆರೆಯ ಹಳೆ ಬಸ್ ನಿಲ್ದಾಣದ ಬಳಿ ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದ ಬಿಜೆಪಿಗರಿಗೆ ಬಂದ್ ಗೆ ಒತ್ತಾಯ ಮಾಡದಂತೆ ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಬಿಜೆಪಿ ಮುಖಂಡನ ಬಂಧಿಸಲು ಪೊಲೀಸರು ಮುಂದಾಗಿದ್ದರು. ಆದರೆ, ಒತ್ತಾಯ ಮಾಡಿ ಬಂದ್ ಮಾಡಿಸಿದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

protest police ಬಸ್ ನಿಲ್ದಾಣ ಕಾರ್ಯಕರ್ತ