‘ಸಿಎಂ ಕುಮಾರಸ್ವಾಮಿ ಕೊಟ್ಟ ಮಾತು ಉಳಿಸಿಕೊಳ್ಳಲಿ’


28-05-2018 413

ಬಳ್ಳಾರಿ: ರಾಜ್ಯ ರೈತರ ಸಾಲಮನ್ನಾಕ್ಕಾಗಿ ಆಗ್ರಹಿಸಿ ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ ಮಾತನಾಡಿದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ, ಅಧಿಕಾರಕ್ಕೆ ಬಂದ 24ಗಂಟೆಯೊಳಗೆ ಸಾಲಮನ್ನಾ ಮಾಡುತ್ತೇವೆ ಎಂದಿದ್ದರು ಸಿಎಂ. ಆದರೆ, ಇನ್ನೂ ಸಾಲಮನ್ನಾ ಮಾಡಲಿಲ್ಲ. ಹಾಗಾಗಿ ಇಂದು ಹೋರಾಟ ಮಾಡುತ್ತಿದ್ದೇವೆ, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಮ್ಮ ಉಸಿರು ಇರುವವರೆಗೆ ರೈತ ಪರ ಹೋರಾಟವನ್ನು ಯಡಿಯೂರಪ್ಪ, ಹಾಗೂ ಬಿಜೆಪಿ ಮಾಡುತ್ತದೆ. ಸಿಎಂ ಕುಮಾರಸ್ವಾಮಿ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ಸಾಲಮನ್ನಾಗಾಗಿ ಆಗ್ರಹಿಸಿದ್ದಾರೆ.

ಇದೇ ವೇಳೆ ಮೃತ ಜಮುಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡರಿಗೆ ಸಂತಾಪ ಸೂಚಿಸಿದರು. ಇವರು ಹಿರಿಯ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು. ನ್ಯಾಮಗೌಡರನ್ನು ಕಳೆದುಕೊಂಡ ಕುಟುಂಬಕ್ಕೆ ದೇವರು ದು:ಖ ಭರಿಸುವ ಶಕ್ತಿ ನೀಡಲಿ. ರಾಜ್ಯ ಸರಕಾರ ಸಾಲಮನ್ನಾ ಮಾಡಿದರೆ ಸಿದ್ದು ನ್ಯಾಮಗೌಡರ ಆತ್ಮಕ್ಕೆ ಶಾಂತಿ ಸಿಕ್ಕಂತಾಗುತ್ತದೆ ಎಂದರು.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

G. Somashekar Reddy Farmers ಹೋರಾಟ ಆಗ್ರಹ