ಬಿಜೆಪಿಯ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷನ ಬಂಧನ


28-05-2018 476

ಕೊಪ್ಪಳ: ಬಲವಂತವಾಗಿ ಅಂಗಡಿಗಳನ್ನ ಬಂದ್ ಮಾಡಲು ಮುಂದಾದ ಬಿಜೆಪಿ ಮುಖಂಡನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯ ರಾಜ್ಯ ರೈತ ಮೋರ್ಚಾ ಘಟಕದ ಉಪಾಧ್ಯಕ್ಷ ತಿಪ್ಪೇರುದ್ರಸ್ವಾಮಿ  ಕೊಪ್ಪಳದ ಬಸ್ ನಿಲ್ದಾಣಕ್ಕೆ ತೆರಳಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ ನಿಲ್ದಾಣದಲ್ಲಿ ಅರೆಸ್ಟ್ ಮಾಡಿದ್ದಾರೆ. ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಬಿಜೆಪಿಯಿಂದ ಹಲವಡೆ ಪ್ರತಿಭಟನೆಗಳು ನಡೆದಿವೆ. ಬಂದ್ ಗೆ ಕೊಪ್ಪಳದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

tipperudra swami farmers ನೀರಸ ಬಲವಂತ