ಸರ್ಕಾರಿ ಐಟಿಐ ಕಾಲೇಜಿನಲ್ಲಿ ಅಗ್ನಿ ಅವಘಡ


28-05-2018 424

ರಾಮನಗರ: ಜಿಲ್ಲೆಯ ಮಾಯಗಾನಹಳ್ಳಿ ಬಳಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿಯಿಂದ ಕಾಲೇಜಿನ ಸ್ಟೋರ್ ರೂಂನಲ್ಲಿದ್ದ ಉತ್ತರ ಪತ್ರಿಕೆಗಳು, ಸೇರಿದಂತೆ ಹಲವಾರು ಮಹತ್ವದ ದಾಖಲೆಗಳು ನಾಶವಾಗಿವೆ. ಕಂಪ್ಯೂಟರ್, ಜೆರಾಕ್ಸ್ ಯಂತ್ರಗಳು, ಇತರೆ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಸ್ಟೋರ್ ರೂಂನಲ್ಲಿದ್ದ ಸೆಕ್ಯೂರಿಟಿ ವೆಂಕಟೇಶ, ಶಿವಣ್ಣ ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಟನೆ ನಡೆದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

fire ITI college ಬೆಲೆಬಾಳುವ ದಾಖಲೆ