ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ


29-05-2018 477

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಂಜೆ 5 ಗಂಟೆಗೆ ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿಯ ಹಲವು ನಾಯಕರು ಭಾಗವಹಿಸಲಿದ್ದಾರೆ. ಚುನಾವಣೆ ಮುಕ್ತಾಯವಾದ ಬಳಿಕ ನಡೆಯುತ್ತಿರುವ ಮೊದಲ ಕೋರ್ ಕಮಿಟಿ ಸಭೆಯಾಗಿದ್ದು, ಸಭೆಯಲ್ಲಿ ವಿಧಾನ ಪರಿಷತ್ ಗೆ ಅಭ್ಯರ್ಥಿ ಆಯ್ಕೆ ಕುರಿತ ಚರ್ಚೆ, ಚುನಾವಣೆಯಲ್ಲಾದ ಸೋಲು-ಗೆಲುವಿನ ಬಗ್ಗೆ ಚರ್ಚೆ, ಜಯನಗರ ಕ್ಷೇತ್ರ ಚುನಾವಣೆ ಗೆಲುವಿಗೆ ಕಾರ್ಯತಂತ್ರ, ಸಾಲಮನ್ನಾ ಬಗ್ಗೆ ಮುಂದಿನ ಹೋರಾಟದ ರೂಪುರೇಷೆ ಮತ್ತು ಪ್ರಮುಖವಾಗಿ ಮುಂದಿನ ಲೋಕಸಭಾ ಚುನಾವಣಾ ತಯಾರಿ ಕುರಿತು ಚರ್ಚೆ ನಡೆಲಿದೆ ಎಂದು ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

yeddyurappa core committee ವಿಧಾನ ಪರಿಷತ್ ಹೋರಾಟ