ಸಾಲಮನ್ನಾ: ಸಿಎಂ ಕುಮಾರಸ್ವಾಮಿ ಮತ್ತೊಂದು ಸವಾಲು!


30-05-2018 519

ಮಂಡ್ಯ: ರಾಜ್ಯ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ರೈತರ ಸಾಲಮನ್ನಾಗೂ  ಮುನ್ನವೇ ಮತ್ತೊಂದು ಸವಾಲು ಎದುರಾಗಿದೆ. ಮಹಿಳಾ ಸ್ವ-ಸಹಾಯ ಸಂಘಗಳ ಸಾಲವನ್ನೂ ಮನ್ನಾ ಮಾಡುವಂತೆ ಕೆ.ಆರ್.ಪೇಟೆಯಲ್ಲಿ ಮಹಿಳೆಯರು ಒತ್ತಾಯಿಸಿದ್ದಾರೆ.

ಕೆ.ಆರ್.ಪೇಟೆ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿರುವಂತೆ ಮಹಿಳಾ ಸ್ವ-ಸಹಾಯ ಸಂಘದ ಸಾಲ‌ಮನ್ನಾಕ್ಕೆ ಆಗ್ರಹಿಸಿದ್ದಾರೆ. ಒಂದು ತಿಂಗಳ ಒಳಗಾಗಿ ಮಹಿಳೆಯರ ಸಂಘದ ಸಾಲವನ್ನು ಮನ್ನಾ ಮಾಡದಿದ್ದರೆ ರಾಜ್ಯಾದ್ಯಂತ  ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

H.d.kumaraswamy self help group ಹೋರಾಟ ಸಂಘ