ಪೇಜಾವರ ಶ್ರೀಗಳ ಹೇಳಿಕೆಗೆ ಜಿಗಜಿಣಗಿ ಪ್ರತಿಕ್ರಿಯೆ


06-06-2018 419

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದ ಕುರಿತು ಪೇಜಾವರ ಶ್ರೀಗಳ ಹೇಳಿಕೆಗೆ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀಗಳು ಕೇಂದ್ರ ಸರ್ಕಾರದ ವಿರುದ್ಧವಾಗಲಿ, ಪ್ರಧಾನಿ ಮೋದಿ ಬಗ್ಗೆಯಾಗಲಿ ಏನೂ ಹೇಳಿಲ್ಲ. ಗಂಗಾ ಶುದ್ಧೀಕರಣ ವಿಚಾರದಲ್ಲಿ ಆಗಬೇಕಾದ ಕೆಲಸ ಆಗಿಲ್ಲ ಎಂದಷ್ಟೇ ಹೇಳಿದ್ದಾರೆ. ಅವರು ಯಾವುದೇ ಕೆಟ್ಟ ದೃಷ್ಟಿಯಿಂದ ಈ ಮಾತುಗಳನ್ನ ಹೇಳಿಲ್ಲ ಎಂದರು. ಇದೇ ವೇಳೆ ರಾಜ್ಯ ಸಮ್ಮಿಶ್ರ ಸರ್ಕಾರ ಎಷ್ಟು ದಿನ ಮುಂದುವರಿಯುತ್ತದೆ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಅವರನ್ನೇ ಕೇಳಿ ಎಂದರು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ.

 


ಒಂದು ಕಮೆಂಟನ್ನು ಬಿಡಿ