ಉಚಿತ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ


08-06-2018 620

ಯಾದಗಿರಿ: ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್(ಎಐಡಿಎಸ್ಒ) ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಧಿಗಳು ಭಾರೀ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಲ್ಲಿ ವಿಫಲವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಿದೆ ಎಂದು ಬಡ ವಿದ್ಯಾರ್ಥಿಗಳು ಕಾದುಕುಳಿತಿದ್ದಾರೆ. ಆದರೆ, ಸರ್ಕಾರ ಈವರೆಗೆ ನೀಡಿಲ್ಲ ಎಂದು ಯಾದಗಿರಿ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದ ಬಳಿ ಬಸ್ ತಡೆದು ಪ್ರತಿಭಟಿಸಿದರು. ಕೂಡಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಯಾದಗಿರಿ ಕೆಎಸ್ಆರ್ಟಿಸಿ ಅಧಿಕಾರಿಗೆ ಮನವಿ ಮಾಡಿದರು.

 

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Bus pass KSRTC ವಿದ್ಯಾರ್ಥಿ ಉಚಿತ