ಚಿಕ್ಕಮಗಳೂರಲ್ಲಿ ಮುಂದುವರೆದ ಧಾರಾಕಾರ ಮಳೆ


09-06-2018 533

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಧಾರಕಾರ ಮಳೆ ಮುಂದುವರೆದಿದೆ. ನಿನ್ನೆಯಿಂದ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಶೃಂಗೇರಿ, ಮೂಡಿಗೆರೆ, ಕೊಪ್ಪ, ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ, ತುಂಗಾ, ಭದ್ರ ,ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ನಿನ್ನೆ ರಾತ್ರಿಯಿಂದಲೂ ನಿರಂತರವಾಗಿ ಸುರಿಯುತ್ತಿದೆ. ಇದರಿಂದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಂದೆಡೆ ವಿದ್ಯುತ್ ಇಲ್ಲದೇ, ಮನೆಯಿಂದ ಹೊರಬರಲಾರದೇ ಜನರು ಪರದಾಡುವಂತಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Rain electricity ಧಾರಕಾರ ಹೇಮಾವತಿ