ಉಚಿತ ಬಸ್ ಪಾಸ್: ವಿದ್ಯಾರ್ಥಿಗಳಿಂದ ಉಗ್ರ ಹೋರಾಟದ ಎಚ್ಚರಿಕೆ


09-06-2018 482

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‍ ಪಾಸ್ ನೀಡುವಂತೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಲ್ಲೇಶ್ವರಂನ 18ನೇ ಕ್ರಾಸ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿ ಫೆಡರೇಷನ್' (ಎಸ್‍ಎಫ್‍ಐ)ನಡೆಸಿದ ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕೂಡಲೇ ಉಚಿತ ಬಸ್‍ ಪಾಸ್ ನೀಡುವಂತೆ ರಾಜ್ಯಸರ್ಕಾರವನ್ನು ಆಗ್ರಹಿಸಿದರು.

ಕಾಲೇಜುಗಳು ಆರಂಭಗೊಂಡು ವಾರಗಳೇ ಕಳೆದಿದ್ದರೂ ಇನ್ನೂ ಬಸ್‍ ಪಾಸ್ ವಿತರಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಬಸ್‍ ಪಾಸ್ ವಿತರಿಸಿ, ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆಯನ್ನು ನಿವಾರಿಸುವಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪ್ರಕಾಶ್ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳಿಗೆ ಬಸ್‍ ಪಾಸ್ ವಿತರಿಸಲು ತಡ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು. ಮಲ್ಲೇಶ್ವರಂ ಸುತ್ತಮುತ್ತಲ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Bus Pass protest ನೇತೃತ್ವ ವಿದ್ಯಾರ್ಥಿ