ರಾಷ್ಟ್ರಪತಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ಸಿದ್ದರಾಮಯ್ಯ ಯಾಕೆ ಗೊತ್ತಾ?


16-06-2018 497

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿರುವುದಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ತಮ್ಮ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರ ಅಧ್ಯಕ್ಷತೆಯಲ್ಲಿ ಬಡ್ತಿ ಮೀಸಲಾತಿ ಕುರಿತು ಸಮಿತಿ ರಚನೆ ಮಾಡಿದ್ದೆವು. ಮೂರು ವಿಚಾರಗಳನ್ನು ಅಧ್ಯಯನ ಮಾಡಿ ಸಮಿತಿ ವರದಿ ನೀಡಿತ್ತು. ವರದಿ ಆಧಾರದ ಮೇಲೆ ಸಾಮಾಜಿಕ ನ್ಯಾಯಾಕ್ಕಾಗಿ ಕಾಯಿದೆ ರೂಪಿಸಿದ್ದೆವು. ಬಹಳ ಜನರ ವಿರೋಧದ ನಡುವೆಯೇ ಕಾಯಿದೆ ಪಾಸ್ ಮಾಡಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದೆವು. ಆದರೆ, ರಾಜ್ಯಪಾಲರು  ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿಕೊಟ್ಟಿದ್ದರು. ಇದೀಗ ರಾಷ್ಟ್ರಪತಿಗಳು ಸಹಿ ಹಾಕಿರುವುದು ಸಂತಸ ತಂದಿದೆ ಎಂದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನಮ್ಮ ಮೇಲಿನ ಅಭಿಮಾನಕ್ಕೆ ಅಧ್ಯಕ್ಷ ಸ್ಥಾನ ಸಿದ್ದರಾಮಯ್ಯ ಅವರಿಗೆ ನೀಡಿ ಎಂದು ಕೆಲವರು ಹೇಳುತ್ತಾರೆ. ಆದರೆ ನನಗೆ ಆ ಸ್ಥಾನದ ಬಗ್ಗೆ ಇಷ್ಟ ಇಲ್ಲ’  ಈ ಕುರಿತು ನಾಯಕರು‌ ಚರ್ಚೆ ಮಾಡುತ್ತಾರೆ ಎಂದು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

siddaramaiah KPCC ಮಾಜಿ ಸಿಎಂ ಬಡ್ತಿ ಮೀಸಲಾತಿ