‘ತಮ್ಮ ಜವಾಬ್ದಾರಿಯನ್ನು ಕೇಂದ್ರದ ಮೇಲೆ ಹೇರಲು ಹೊರಟಿದ್ದಾರೆ ಸಿಎಂ’


18-06-2018 519

ಬೆಂಗಳೂರು: ವಿಧಾನಸೌಧದಲ್ಲಿ ಬಿ.ಎಸ್.ಯಡಿಯೂರಪ್ಪ ಸಮ್ಮಿಶ್ರ ಸರ್ಕಾರ ಮತ್ತು ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ‘ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡು ತಿಂಗಳು ಕಳೆದಿದೆ. ಪ್ರಣಾಳಿಕೆಯಲ್ಲಿ ಅನೇಕ ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ. ಆದರೆ, ಈಗ ತಂದೆ-ಮಗ ಇಬ್ಬರೂ ರೈತರ ಸಾಲಮನ್ನಾ ವಿಚಾರವಾಗಿ ಒಂದೊಂದು ಮಾತನಾಡುತ್ತಿದ್ದಾರೆ. ಇದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷವನ್ನ ಕೇಳಬೇಕು ಅಂತಿದ್ದಾರೆ. ಯಾವುದೇ ಹೊಸ ಘೋಷಣೆಯನ್ನು ಮಾಡಬೇಕಾದರೂ ಮಿತ್ರಪಕ್ಷವನ್ನು ಕೇಳಬೇಕು ಅಂತಿದ್ದಾರೆ’ ಎಂದವರು ದೂರಿದರು.

‘ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಏನು ಹೇಳಿದ್ದರೆಂದು ಗೊತ್ತಿದೆ. ಈಗ ರೈತರ ಸಾಲಮನ್ನಾ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಹೊಸ ಬಜೆಟ್ ಮಂಡನೆ ಅಗತ್ಯವಿಲ್ಲ ಅಂತಾರೆ. ಆದರೆ, ಅವರದೇ ಪಕ್ಷದ ಕೆಲ ನಾಯಕರು ಹೊಸ ಬಜೆಟ್ ಅಗತ್ಯವಿದೆ ಅಂತಾರೆ ಹೀಗಾಗಿ ಸಮ್ಮಿಶ್ರ ಸರ್ಕಾರ ಈಗ ಗೊಂದಲದ ಗೂಡಾಗಿದೆ’ ಎಂದು ಟೀಕಿಸಿದ್ದಾರೆ.

'ಈ ಹಿಂದಿನ ಸರ್ಕಾರ ಸಹಕಾರ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ಮಾಡಿದೆ. ಆದರೆ ಇನ್ನೂ ನಾಲ್ಕೈದು ಸಾವಿರ ಕೋಟಿ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು. ರೈತರ ಸಂಕಷ್ಟಕ್ಕೆ ಸಮ್ಮಿಶ್ರ ಸರ್ಕಾರ ಸ್ಪಂದಿಸುತ್ತಿಲ್ಲ, ನಮ್ಮ ಪಕ್ಷದವರಿಗೆ ಬಜೆಟ್ ಮಂಡನೆವರೆಗೂ ಕಾಯೋಣ ಎಂದು ಹೇಳಿದ್ದೇನೆ. ಎಲ್ಲವನ್ನೂ ನಾವೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ' ಎಂದರು.

'ರೈತರ ಸಾಲಮನ್ನಾ ಮಾಡದಿದ್ದಲ್ಲಿ ಹೋರಾಟ ಮಾಡುತ್ತೇವೆ, ಹೋರಾಟದ ರೂಪುರೇಷೆ ಹೇಗಿರಬೇಕು ಎಂಬ ಬಗ್ಗೆ ಯೋಚನೆ ಮಾಡುತ್ತೇವೆ. ಸಿಎಂ ಬಜೆಟ್ ಗೂ ಮೊದಲು ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗಳನ್ನೊಮ್ಮೆ ನೋಡಲಿ ಎಂದು ಸಲಹೆ ನೀಡಿದ್ದಾರೆ. ಕುಮಾರಸ್ವಾಮಿ ಪ್ರಧಾನಿ ಬಳಿ ಶೇಕಡ50 ರಷ್ಟು ಸಾಲಮನ್ನಾ ನೆರವು ಕೇಳಿದ್ದಾರೆ. ಈ ಮೂಲಕ ತಮ್ಮ ಜವಾಬ್ದಾರಿಯನ್ನು ಕೇಂದ್ರದ ಮೇಲೆ ಹೇರಲು ಹೊರಟಿದ್ದಾರೆ. ಇದು ನಿಜಕ್ಕೂ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

yedyurappa siddaramaiah ಸಾಲಮನ್ನಾ ಪ್ರಣಾಳಿಕೆ