ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ !


26-05-2017 540

ವಿಜಯಪುರ: ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಉತ್ತರ ಕರ್ನಾಟಕದ ಜನ್ರು ಎರಡೂ ಪಕ್ಷಗಳಿಗೆ ಅವಕಾಶ ಕೊಟ್ಟಿದ್ದಾರೆ. ಅದರಂತೆ ಈ ಬಾರಿ ನಮಗೆ ಅವಕಾಶ ಕೊಡಲಿದ್ದಾರೆ ಎಂಬ ವಿಶ್ವಾಸವಿದೆ ಎಂಬ ಮಾತನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ . ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಈ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ನಾನು ಅಧಿಕಾರಿಗಳನ್ನು ಕೇಳಿ ಸರ್ಕಾರ ನಡೆಸುವುದಿಲ್ಲ. ತಿಂಗಳಿಗೊಮ್ಮೆ ಎಲ್ಲಾ ಜಿಲ್ಲೆಯ ರೈತರನ್ನು ಸಭೆ ಕರೆದು ಅವರೊಂದಿಗೆ ಚರ್ಚಿಸಿ ಸರ್ಕಾರ ನಡೆಸುತ್ತೇನೆ ಎಂದರು. ಮುಂದಿನ ಚುನಾವಣೆಗೆ ಈಗಾಗಲೆ 118 ಅಭ್ಯರ್ಥಿಗಳ ಪಟ್ಟಿ ತಯಾರಾಗಿದೆ. ಜೂನ್ 15ರ ಬಳಿಕ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು. ರಾಷ್ಟ್ರೀಯ ಪಕ್ಷಗಳಿಗೂ ಮೊದಲೆ ನಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಗೊಳಿಸಲಾಗುವುದು ಎಂದು  ತಿಳಿಸಿದ್ದಾರೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಎಲ್ಲ ಜಿಲ್ಲೆಳಿಂದ ಜನರ ಸಮಸ್ಸೆಗಳನ್ನು ಸಂಗ್ರಹಣೆ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಬರಗಾಲವಿದ್ದರೂ ಸಹ ಬಿಜೆಪಿ, ಕಾಂಗ್ರೆಸ್ ಪಕ್ಷಗಳೆರಡೂ ತಮ್ಮ ತಮ್ಮ ರಾಜಕೀಯ ಚರ್ಚೆಯಲ್ಲಿ ತೊಡಗಿವೆ ಎಂದರು.