ಗುತ್ತಿಗೆ ಪೌರಕಾರ್ಮಿಕರ ಧರಣಿ: ಕ್ಯಾರೆ ಅನ್ನದ ಡಿಸಿ!


19-06-2018 419

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿ ನಿವಾಸದ ಮುಂದೆ ನೂರಾರು ಮಂದಿ ಗುತ್ತಿಗೆ ಪೌರ ಕಾರ್ಮಿಕರು ಧರಣಿ ನಡೆಸಿದ್ದಾರೆ. ಬೆಳಿಗ್ಗೆಯಿಂದಲೇ ತಮ್ಮ ಕೆಲಸ ಸ್ಥಗಿತಗೊಳಿಸಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ನಗರಸಭೆ ಕಳೆದ ನಾಲ್ಕು ತಿಂಗಳಿನಿಂದ ಪೌರಕಾರ್ಮಿಕರಿಗೆ ವೇತನ ನೀಡಿದಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳ ಶಾಲಾ ಶುಲ್ಕ ಕಟ್ಟಲಾಗದೆ ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಮತ್ತೊಂದೆಡೆ ಮನೆ ಬಾಡಿಗೆ ನೀಡಲಾಗದೆ ಬದುಕು ದುಸ್ತವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ ಗುತ್ತಿಗೆ ಕಾರ್ಮಿಕರು. ಸುಮಾರು ಅರ್ಧ ಗಂಟೆಯಿಂದಲೂ ಕಾರ್ಮಿಕರು ಪ್ರತಿಭಟಿಸುತ್ತಿದ್ದರೂ ಕ್ಯಾರೆ ಅನ್ನದ ಡಿಸಿ ವಿ.ವಿ.ಜೋತ್ಸ್ನಾ ಅವರು, ಮನೆಯಿಂದ ಹೊರಗಡೆ ಬಂದಿಲ್ಲ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

protest contract labourers ಜಿಲ್ಲಾಧಿಕಾರಿ ಆಕ್ರೋಶ