ಗಾಂಜಾದೊಂದಿಗೆ ಆರೋಪಿ ಮತ್ತು ಆಟೋ ಸೆರೆ


22-06-2018 278

ಉತ್ತರ ಕನ್ನಡ: ಸುಮಾರು 1.65 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಶಿರಸಿ ಗ್ರಾಮೀಣ ಪೊಲೀಸರು ಆರೋಪಿಗಳೊಂದಿಗೆ ವಶಕ್ಕೆ ಪಡೆದಿದ್ದಾರೆ. ಶಿರಸಿಯ ಬೊಮ್ಮನಳ್ಳಿ ಕ್ರಾಸ್ ಬಳಿ ಅನಧಿಕೃತವಾಗಿ ರಿಕ್ಷಾದಲ್ಲಿ ಸಾಗಿಸುತ್ತಿದ್ದ 11ಕೆಜಿ 100ಗ್ರಾಂ.ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ದಾಂಡೇಲಿ ಮೂಲದ ಮಕ್ತುಮ್ ಸಾಬ್ ಗಡದ್ ಎಂಬಾತನನ್ನು ಬಂಧಿಸಿದ್ದಾರೆ. ಯಲ್ಲಾಪುರ ಕಡೆಯಿಂದ ಶಿರಸಿಗೆ ಬರುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಗಾಂಜಾ ಮತ್ತು ಆರೋಪಿಯನ್ನು ಸೆರೆಹಿಡಿದಿದ್ದಾರೆ. ಇನ್ನು ಸಾಗಾಟಕ್ಕೆ ಬಳಸಿದ ರಿಕ್ಷಾವನ್ನು ಜಪ್ತಿ ಮಾಡಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Ganja Auto ಗ್ರಾಮೀಣ ದಾಳಿ