ಯಾರ ಹಂಗಿನಲ್ಲೂ ನಾನಿಲ್ಲ: ಸಿಎಂ ಕುಮಾರಸ್ವಾಮಿ


25-06-2018 479

ಬೆಂಗಳೂರು: ‘ವಿಧಾನಸೌಧದಲ್ಲಿ ಕಮೀಷನ್ ವ್ಯವಹಾರ ನಡೆಯುತ್ತಿರುವುದು ನನಗೆ ಗೊತ್ತಿದೆ. ರೈತರ ಸಾಲಮನ್ನಾ ಮಾಡುವುದರಿಂದ ರೈತರಿಗೆ ಅನುಕೂಲವಾಗಬೇಕೇ ಹೊರತು ಯಾರೋ ಮಧ್ಯವರ್ತಿಗಳು ದುಡ್ಡು ತಿಂದು ಹೋಗುವಂತಾಗಬಾರದು’ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ ಸಾಲಮನ್ನಾ ಕುರಿತಂತೆ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು ಹಾಗೂ ನಿರ್ದೇಶಕರೊಂದಿಗೆ. ಹೆಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು.

ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಈಗಾಗಲೇ ಸಹಕಾರಿ ಬ್ಯಾಂಕ್ ಗಳಲ್ಲಿನ 8 ಸಾವಿರ ಕೋಟಿ ರೂ.ಸಾಲವನ್ನು ಮನ್ನಾ ಮಾಡಲಾಗಿದೆ. ಇನ್ನೂ 10 ಸಾವಿರ ಕೋಟಿ ರೂ.ಸಾಲಮನ್ನಾ ಮಾಡಬೇಕು. ಮುಂದಿನ ಮಾರ್ಚ್ ಅಂತ್ಯದವರೆಗಿನ ಸಾಲ ಮನ್ನಾ ಮಾಡಬೇಕು ಎಂಬ ಒತ್ತಾಯವಿದೆ. ಅದೇ ವೇಳೆ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿರುವುದರಿಂದ 16,000 ಕೋಟಿ ರೂ.ಹೆಚ್ಚಿನ ಹೊರೆಯಾಗಿದೆ. ಮತ್ತೊಂದು ಕಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನ್ನು‌ ಮುಂದುವರಿಸಿ ಎಂದು ಹೇಳುತ್ತಿದ್ದಾರೆ. ನಾನು ಯಾರ ಹಂಗಿನಲ್ಲೂ ಇಲ್ಲ. ನನಗೆ ಯಾರು ಭಿಕ್ಷೆ ಕೊಟ್ಟಿಲ್ಲ. ಈ ಸರ್ಕಾರ ಎಷ್ಟು ದಿನ‌ ಇರುತ್ತೋ ಇಲ್ಲವೋ ಗೊತ್ತಿಲ್ಲ ಅದಕ್ಕೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸಾಲ ಮನ್ನಾ ಮಾಡಬೇಡಿ ಅಂತಾ ಹಣಕಾಸು ಇಲಾಖೆ ಅಧಿಕಾರಿಗಳೇ ಹೇಳುತ್ತಿರುವುದು ನನ್ನ ಗಮನಕ್ಕೂ ಬಂದಿದೆ. ನಾನು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತೇನೆ. ವಿಧಾನಸೌಧದಲ್ಲಿ ಕಮೀಷನ್ ವ್ಯವಹಾರ ನಡೆಯುತ್ತಿರುವುದು ನಮಗೆ ಗೊತ್ತಿದೆ. ರೈತರ ಸಾಲ ಮನ್ನಾ ಮಾಡುವುದರಿಂದ ರೈತರಿಗೆ ಅನುಕೂಲವಾಗಬೇಕು. ಯಾರೋ ಮಧ್ಯವರ್ತಿಗಳು ದುಡ್ಡು ತಿಂದು ಹೋಗುವಂತಾಗಬಾರದು ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

H.D.Kumaraswamy Loan waiver ವಿಧಾನಸೌಧ ಸಾಲಮನ್ನಾ