ಐಜಿಪಿ ಎಂದು ಹೇಳಿಕೊಂಡು ಸುಲಿಗೆ ಮಾಡುತ್ತಿದ್ದವನ ಬಂಧನ


27-06-2018 359

ಬೆಂಗಳೂರು: ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಐಜಿಪಿ ಎಂದು ಹೇಳಿಕೊಳ್ಳುತ್ತಿರುವ ರಮಾನಂದ ಸಾಗರ್ ಎಂಬಾತನನ್ನು ಜಯನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

ಸರ್ಕಾರಿ ಅಧಿಕಾರಿಗಳು, ವೈದ್ಯರನ್ನ ಬೆದರಿಸಿ ಸುಲಿಗೆ ಮಾಡುತ್ತಿದ್ದ ಅಸಾಮಿ. ರಾತ್ರಿ ಪಾಳಿ ಕೆಲಸಕ್ಕೆ ಬರುವ ಮಹಿಳಾ ವೈದ್ಯ, ನರ್ಸ್ಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂಬ ಆರೋಪವೂ ಕೇಳಿ ಬಂದಿದೆ. ಈತ ಆರ್.ಟಿ.ಐ ಕಾರ್ಯಕರ್ತ ಎನ್ನಲಾಗಿದ್ದು, ಐಜಿಪಿ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದನು.

ಈ ಕುರಿತು ಪೊಲೀಸ್ ಕಮೀಷನರ್, ಮಹಿಳಾ ಆಯೋಗಕ್ಕೆ ಸರ್ಕಾರಿ ಅಧಿಕಾರಿಗಳು, ವೈದ್ಯರು ದೂರು ನೀಡಿದ್ದರು. ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆಗೆ ಇಳಿದಿದ್ದ ರಮಾನಂದ ಸಾಗರ್. ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದನು. ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಎರಡು ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Police Fake ಮಹಿಳಾ ಆಯೋಗ ಕೆಲಸ