ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ ಲಾರಿ ಮಾಲೀಕರು


06-07-2018 345

ಬೆಂಗಳೂರು: ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ ಲಾರಿ ಮಾಲೀಕರು. ಜುಲೈ 20ರಿಂದ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಅನಿರ್ದಿಷ್ಟ ಕಾಲ ವಾಣಿಜ್ಯ ವಾಹನಗಳ ಸಂಚಾರ ಸ್ಥಗಿತಗೊಳಿಸಿ, ರಾಷ್ಟ್ರವ್ಯಾಪಿ ಪ್ರತಿಭಟಿಸಲಿದ್ದಾರೆ. ಇತ್ತೀಚೆಗಷ್ಟೆ ಬಿ.ಚನ್ನಾರೆಡ್ಡಿ ನೇತೃತ್ವದ ಬಣ ಲಾರಿ ಮುಷ್ಕರ ನಡೆಸಿತ್ತು. ಇದೀಗ ಷಣ್ಮುಗಪ್ಪ ನೇತೃತ್ವದಲ್ಲಿ ಮತ್ತೊಮ್ಮೆ ಲಾರಿ ಮುಷ್ಕರ ನಡೆಸಲಿದ್ದಾರೆ. ಇದರಿಂದ  ಸಾಮಾನ್ಯ ಜನರಿಗೆ ದಿನನಿತ್ಯದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಏರುಪೇರಾಗಲಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Lorry Strike ಸಾಮಾನ್ಯ ಪೂರೈಕೆ