ಬಾದಾಮಿಗೆ ಕುಡಿಯುವ ನೀರು: ಸಿದ್ದರಾಮಯ್ಯ ಸೂಚನೆ


07-07-2018 392

ಬೆಂಗಳೂರು: ಬಾದಾಮಿ ವಿಧಾನಸಭೆ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವುದರಿಂದ ಬೆಳಗಾವಿಯ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸ್ಥಳೀಯ ಶಾಸಕ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಬೆಳಗಾವಿ ಪ್ರಾದೇಶಿಕ ಆಯುಕ್ತ ಮೇಘಣ್ಣನವರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಮಲಪ್ರಭಾ ಅಚ್ಚುಕಟ್ಟು ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಹಾಗಾಗಿ ನೀರು ಬಿಡುಗಡೆ ಮಾಡುವಂತೆ ಸೂಚಿಸಿದರು.

ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ರೈತರ ಬೆಳೆಗಳಿಗೂ ನೀರು ದೊರೆಯುತ್ತದೆ ಎಂದರು. ನೀರು ಬಿಡುಗಡೆಗೆ ತಕ್ಷಣ ಕ್ರಮ ಜರುಗಿಸುವುದಾಗಿ ಪಾದೇಶಿಕ ಆಯುಕ್ತರು ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Siddaramaiah Ex-CM ಮಲಪ್ರಭಾ ಬಾದಾಮಿ