ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ಶಕ್ತಿ ಹೊಂದಿದೆ: ಬಿಕೆ ಹರಿಪ್ರಾದ್


09-07-2018 520

ಬಾಗಲಕೋಟೆ: ಅಕ್ಟೋಬರ್ ತಿಂಗಳ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಸಿಎಂ ಆಗುತ್ತಾರೆ ಎಂಬ ರಂಭಾಪುರಿ ಶ್ರೀಗಳ ಹೇಳಿಕೆ ಬಗ್ಗೆ ತಾನು ಪ್ರತಿಕ್ರಿಯಿಸುವುದಿಲ್ಲ ಎಂದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಾದ್ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ‘ಸ್ವಾಮೀಜಿಗಳು ಅವರ ಅನಿಸಿಕೆ ಹೇಳಿದ್ದಾರೆ. ರಾಜಕಾರಣಿಗಳು ಹೇಳಿದ್ದರೆ ನಾನು ಉತ್ತರ ಕೊಡುತ್ತಿದ್ದೆ. ಅವರು ಮಾತನಾಡುವ ವೇಳೆ ನಾವು ಮಾತನಾಡೋದು ತಪ್ಪು' ಎಂದಿದ್ದಾರೆ.' ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್-ಜೆಡಿಎಸ್ ಲೋಕಸಭಾ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ, ದೇಶದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ಶಕ್ತಿ ಹೊಂದಿದೆ. ಬಿಜೆಪಿ ಬಿಟ್ಟು ಯಾರಾದರೂ ಪ್ರಧಾನ ಮಂತ್ರಿ ಆಗಲಿ’ ಎಂದರು.

ಸಮ್ಮಿಶ್ರ ಸರ್ಕಾರ ಅಂದ ಮೇಲೆ ಚರ್ಚೆಗಳು, ಗೊಂದಲಗಳು ಸಾಮಾನ್ಯ. ಈ ಬಗ್ಗೆ ಸಮನ್ವಯ ಸಮಿತಿ ಇದೆ, ಸಮಿತಿ ಮೂಲಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು  ‘ಸಮ್ಮಿಶ್ರ ಸರಕಾರ ಹೆಚ್ಚು ದಿನ ಉಳಿಯೋದಿಲ್ಲ’ ಎಂಬ ಡಿವಿ ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸದಾನಂದಗೌಡ ಓರ್ವ ರಾಜಕೀಯ ಪಂಡಿತ, ಭವಿಷ್ಯ ನುಡಿಯತಕ್ಕಂತಹವರು, ಅವರ ಭವಿಷ್ಯ ಏನಾಗುತ್ತದೆ ಎಂದು ಎಲ್ಲರೂ ನೋಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಸದಸ್ಯರುಗಳ ಆಯ್ಕೆ ವಿಚಾರವಾಗಿ, ಮೊದಲನೆ ಹಂತದಲ್ಲಿ ಹಿರಿಯ ಶಾಸಕರಿಗೆ ಕೊಡುವ ತೀರ್ಮಾನ ಮಾಡಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

B.K. Hariprasad AICC ನಿಗಮ ಮಂಡಳಿ ಕಾರ್ಯಕರ್ತ