ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ


09-07-2018 391

ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಅಂಕೋಲಾ-ಹೊಸಪೇಟೆ ಹೆದ್ದಾರಿಯ ಭಂಡಿವಾಡ ಕ್ರಾಸ್ ಬಳಿ ಶಿರಗುಪ್ಪಿ, ಭಂಡಿವಾಡ, ಮಂಟೂರು ಸೇರಿದಂತೆ ವಿವಿಧ ಗ್ರಾಮದ ರೈತರು ರಸ್ತೆ ತೆಡೆಗೆ ಮುಂದಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ ರಾಜ್ಯ, ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಲ್ಲಿ ಸಂಪೂರ್ಣ ಸಾಲಮನ್ನಾ ಮಾಡುತ್ತಾರೆಂದು ಆಶಿಸಿದ್ದ ರೈತರ ನಿರೀಕ್ಷೆ ಹುಸಿಯಾಗಿದೆ. ಸಂಪೂರ್ಣ ಸಾಲಮನ್ನಾ ಘೋಷಣೆ ಮಾಡದೇ ಸಿಎಂ ಕುಮಾರಸ್ವಾಮಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಕೊಟ್ಟ‌ಮಾತಿನಂತೆ ಸಂಪೂರ್ಣ ಸಾಲಮನ್ನಾ ಮಾಡಲೇಬೇಕು ಎಂದು ರೈತರು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ