ಮೊಹಿದೀನ್ ಅವರಿಗೆ ಮಾಜಿ ಸಿಎಂ ಅಂತಿಮ ನಮನ


10-07-2018 408

ಬೆಂಗಳೂರು: ತೀವ್ರ ಅನಾರೋಗ್ಯ ಹಿನ್ನೆಲೆ ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹಿದೀನ್ ಅವರು ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೊಹಿದೀನ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಅವರ ಸಂಜಯ್ ಗಾಂಧಿ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿತ್ತು. ನಂತರ, ಅಂತ್ಯಸಂಸ್ಕಾರಕ್ಕಾಗಿ ಅವರ ತವರು ಊರಾದ ಬಜ್ಪೆಗೆ ತೆಗೆದುಕೊಂಡು ಹೋಗಲಾಯಿತು. ರಾತ್ರಿ 8 ಗಂಟೆಗೆ ಅಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಮಾಜಿ ಸಚಿವ ಮೊಹಿದೀನ್ ಅವರ ಸಂಜಯನಗರದ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಮೊಹಿದೀನ್ ಅವರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ ಸಿದ್ದರಾಮಯ್ಯ ಅವರು, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಧರ್ಮಸ್ಥಳದ ಶಾಂತಿವನದಲ್ಲಿದ್ದಾಗ ಮೊಹಿದೀನ್ ಅವರು ಭೇಟಿಯಾಗಿದ್ದನ್ನೂ ಸಿದ್ದರಾಮಯ್ಯ ಅವರು ಇದೇ ವೇಳೆ ಸ್ಮರಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

siddaramaiah B.A.Mohideen ಸಾರ್ವಜನಿಕ ಸಾಂತ್ವನ