ತಣ್ಣಗಾಗಿಲ್ಲ ಅತೃಪ್ತ ಕೈ ಶಾಸಕರ ಅಸಮಾಧಾನ!


11-07-2018 564

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರ ಅಸಮಾಧಾನ ಸಧ್ಯಕ್ಕೆ ತಣ್ಣಗಾಗುವಂತೆ ಕಾಣುತ್ತಿಲ್ಲ. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಿಂದಲೂ ಅತೃಪ್ತರೂ ದೂರ ಉಳಿದಿದ್ದಾರೆ.

ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಚಿವ ಸ್ಥಾನ ವಂಚಿತರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದರು. ಎಂ.ಬಿ.ಪಾಟೀಲ್ ಸೇರಿದಂತೆ ಅವರ ‌ಬಣದ ಶಾಸಕರಾದ ಸುಧಾಕರ್, ಸತೀಶ್ ಜಾರಕಿ ಹೊಳಿ, ಎಂಟಿಬಿ ನಾಗರಾಜ್ ಗೈರಾದವರು.

ಅಲ್ಲದೆ, ಹೆಚ್.ಕೆ.ಪಾಟೀಲ್, ರಾಮಲಿಂಗಾ ರೆಡ್ಡಿ, ಎಂ.ಕೃಷ್ಣಪ್ಪ, ಅಲ್ಪಸಂಖ್ಯಾತ ಸಮುದಾಯದ ಶಾಸಕರಾದ ತನ್ವೀರ್ ಸೇಠ್, ರೋಷನ್ ಬೇಗ್, ಹ್ಯಾರಿಸ್ ಕೂಡ ಸಭೆಗೆ ಗೈರು ಹಾಜರಾಗಿದ್ದರು.

ಸಭೆ ಬಳಿಕ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಶಿಸ್ತಿನಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಶಾಸಕರಿಗೆ ಮಾರ್ಗದರ್ಶನ ಕೊಟ್ಟಿದ್ದೇವೆ. ಸದನದಲ್ಲೂ ಕೂಡ ಎಲ್ಲರೂ ಭಾಗವಹಿಸಬೇಕೆಂದು ಸೂಚನೆ ಕೊಟ್ಟಿದ್ದೇವೆ. ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಕೂಡಲೇ ಸಭಾಪತಿಗಳ ನೇಮಕ ಮಾಡುವ ಬಗ್ಗೆಯೂ ತೀರ್ಮಾನ ಆಗಿದೆ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

siddaramaiah Meeting ಶಾಸಕಾಂಗ ಅತೃಪ್ತ