ಮಡಿಕೇರಿಗೆ ಇಂದು ಸಿಎಂ ಕುಮಾರಸ್ವಾಮಿ


19-07-2018 291

ಮಡಿಕೇರಿ: ಎರಡು ದಿನಗಳ ಕಾರ್ಯಕ್ರಮಕ್ಕಾಗಿ ಸಿಎಂ ಕುಮಾರಸ್ವಾಮಿ ಇಂದು ಮಡಿಕೇರಿಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳ ನಂತರ ಮಧ್ಯಾಹ್ನ ಮೂರು ಗಂಟೆಗೆ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಚಿವರಾದ ಡಿ.ಕೆ.ಶಿವಕುಮಾರ್, ಜಿ.ಟಿ.ದೇವೇಗೌಡ ಸೇರಿದಂತೆ ಹಲವು ಸಚಿವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ಮಡಿಕೇರಿಯಲ್ಲಿ ಸಿಎಂ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Madikeri programmes ಕುಮಾರಸ್ವಾಮಿ ತಲಕಾವೇರಿ