ರಾಜಕೀಯ ಸ್ವಾರ್ಥಕ್ಕಾಗಿ ಒಡೆದಾಳುವ ನೀತಿ ಸರಿಯಲ್ಲ: ಬಿಎಸ್ವೈ


31-07-2018 337

ಹುಬ್ಬಳ್ಳಿ: ‘ಕರ್ನಾಟಕ ಏಕೀಕರಣ ಆದ ಮೇಲೆ ಈ ರೀತಿ ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂದು ಯಾವ ಮುಖ್ಯಮಂತ್ರಿಯೂ ಮಾತನಾಡಿರಲಿಲ್ಲ. ಸಿಎಂ ಕುಮಾರಸ್ವಾಮಿ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಮಾಧ್ಯಮ ಮಿತ್ರರರನ್ನು ಹಗುರವಾಗಿ ಮಾತನಾಡುತ್ತಿದ್ದಾರೆ’ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಬಿಎಸ್ವೈ, ದೇವೇಗೌಡರು ಕುಮಾರಸ್ವಾಮಿ ಹೇಳಿಕೆ ಬಗ್ಗೆ ಒಂದು ಶಬ್ಧವೂ ಮಾತನಾಡುವುದಿಲ್ಲ. ಅವರ ತಂದೆಯ ಒಪ್ಪಿಗೆ ಇಲ್ಲದೆಯೇ ಇವರು ಮಾತನಾಡುವುದಿಲ್ಲ ಎಂದು ಕುಟುಕಿದ್ದಾರೆ. ಬೆಳಗಾವಿಯಲ್ಲಿ ನೂರಾರು ಜನ ಸ್ವಾಮೀಜಿಗಳು ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ, ಪ್ರತಿಭಟನಾ ಸ್ಥಳಕ್ಕೆ ಬಂದು ದೇವೇಗೌಡರು ಅವರ ಮನವೊಲಿಸಲು ಪ್ರಯತ್ನ ಮಾಡಬೇಕು.

ಇಡೀ ರಾಜ್ಯಕ್ಕೆ ಅನ್ನ ಕೊಡುತ್ತಿರುವುದು ಉತ್ತರ ಕರ್ನಾಟಕ, ಇಡೀ ಕರ್ನಾಟಕಕ್ಕೆ ಬೆಳಕು ನೀಡುವುದು ಕಾರವಾರ, ಬಜಟ್ ನಲ್ಲಿ ಆಲಮಟ್ಟಿ ನೀರಾವರಿ ಯೋಜನೆಗೆ ನಯಾ ಪೈಸೆ ತೆಗೆದಿಟ್ಟಿಲ್ಲ. ಈ ಹಿಂದೆ ನೀರಾವರಿ ಯೋಜನೆಗೆ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ. ಆಲಮಟ್ಟಿ ಉದ್ಯಾನವನವನ್ನು ಅಭಿವೃದ್ಧಿ ಮಾಡಿಲ್ಲ, ಕೆಆರ್‌ಎಸ್ ಅಭಿವೃದ್ಧಿ ಮಾಡಿದ್ದಾರೆ. ಹೈದರಾಬಾದ್ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ ಅವುಗಳನ್ನು ಭರ್ತಿ ಮಾಡಲು ಇವರು ಮನಸ್ಸು ಮಾಡಿಲ್ಲ ಎಂದು ಬಿಎಸ್ವೈ ದೂರಿದ್ದಾರೆ.

ಬೆಳಗಾವಿ ಸುವರ್ಣ ಸೌಧದ ಮುಂದೆ ನಡೆಯುತ್ತಿರುವ ಪ್ರತಿಭಟನಾಕಾರರಲ್ಲಿ ಮನವಿ ಮಾಡುತ್ತೇನೆ, ಹೋರಾಟ ಮಾಡುವುದು ತಪ್ಪಲ್ಲ. ಆದರೆ ರಾಜ್ಯ ಇಭ್ಭಾಗವಾಗಬಾರದು, ನಾವು ಬದುಕಿರುವ ವರೆಗೂ ರಾಜ್ಯವನ್ನ ಇಭ್ಭಾಗ ಮಾಡಲು ಬಿಡುವುದಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಒಡೆದಾಳುವ ನೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

yeddyurappa Airport ರಾಜಕೀಯ ಸುವರ್ಣ ಸೌಧ