‘ಸಿಎಂ ಹೇಳಿಕೆಯಿಂದ ಕಾಂಗ್ರೆಸ್ ಗೆ ಸ್ವಲ್ಪ‌ಮಟ್ಟಿಗೆ ಹಾನಿಯಾಗಿದೆ’


31-07-2018 289

ಬೆಂಗಳೂರು: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕುರಿತಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಗೆ ಸ್ವಲ್ಪ‌ಮಟ್ಟಿಗೆ ಹಾನಿಯಾಗಿರೋದು ನಿಜ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಸಮಯವಿದೆ. ಅಷ್ಟರಲ್ಲಿ ಈ ಹಾನಿಯನ್ನು ಸರಿಪಡಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಜೊತೆಗೆ ಕುಮಾರಸ್ವಾಮಿಯವರಿಗೂ ತಮ್ಮ ಹೇಳಿಕೆ ವಾಪಸ್ ಪಡೆಯಲು ಮನವಿ ಮಾಡುತ್ತೇವೆ. ಸಮಗ್ರ ಕರ್ನಾಟದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಭಾಗಕ್ಕೆ ಆಗಿರುವಷ್ಟು ಅಭಿವೃದ್ಧಿ ಉತ್ತರ ಕರ್ನಾಟಕಕ್ಕೆ ಆಗಿಲ್ಲವಾದರೂ, ಅಭಿವೃದ್ಧಿ ಆಗೇ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಸಚಿವ ಸಂಪುಟ ಸ್ಥಾನಗಳ ಭರ್ತಿಯಲ್ಲೂ ಅಸಮತೋಲನವಾಗಿದೆ. ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಿಂದ ಅತಿ ಹೆಚ್ಚು ಶಾಸಕರು ಆಯ್ಕೆಯಾಗಿದ್ದರೂ ಸಚಿವ ಸ್ಥಾನ ಮಾತ್ರ ಹೆಚ್ಚು ಸಿಗುತ್ತಿಲ್ಲ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೂ ಈ ಪ್ರವೃತ್ತಿ ಬೆಳೆದು ಬಂದಿದೆ ಎಂದು ಹೇಳಿದ್ದಾರೆ.


ಒಂದು ಕಮೆಂಟನ್ನು ಬಿಡಿ