ಕೊಪ್ಪಳದಲ್ಲಿ ಬಂದ್ ವಿರುದ್ಧ ಪ್ರತಿಭಟನೆ


02-08-2018 232

ಕೊಪ್ಪಳ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸುತ್ತಿರುವುದನ್ನು ವಿರೋಧಿಸಿ, ಅಖಂಡ ಕರ್ನಾಟಕ ಉಳುವಿಗಾಗಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ನೂರಾರು ಕಾರ್ಯಕರ್ತರು ಪತ್ಯೇಕತೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ‘ರಾಜಕಾರಣಿಗಳು ತಮ್ಮ ಹಿತಾಸಕ್ತಿಗಾಗಿ ರಾಜ್ಯ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಮಾಡುವ ಕೆಲಸ ಮಾಡಲಿ. ಅದನ್ನ ಬಿಟ್ಟು ರಾಜ್ಯ ಒಡೆಯುವುದಕ್ಕೆ ಮುಂದಾದರೆ, ರಾಜೀನಾಮೆ ಕೊಟ್ಟು ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Praveen Kumar Shetty Protest ರಾಜೀನಾಮೆ ಕೆಲಸ