ಬೆಳಗಾವಿಯಲ್ಲಿ ರೈತರ ಪ್ರತಿಭಟನೆ


02-08-2018 451

ಬೆಳಗಾವಿ: ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಬಂದ್ ಹಿನ್ನೆಲೆ, ಬೆಳಗಾವಿ ಪೊಲೀಸ್ ಕಮಿಷನರ್ ಪ್ರತಿಭಟನಾ ನಿರತ ರೈತರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಪೊಲಿಸ್ ಕಮಿಷನರ್ ಡಿ.ಸಿ.ರಾಜಪ್ಪ ಅವರು, ಉತ್ತರ ಕರ್ನಾಟಕ ರೈತ ಸಂಘದ ಜಿಲ್ಲಾದ್ಯಕ್ಷ ಮಹಾದೇವ ನೇತೃತ್ವದ ರೈತರ ಪ್ರತಿಭಟನೆ ಮಾರ್ಗಕ್ಕೆ ಅನುಮತಿ ನೀಡಿದ್ದಾರೆ. ರೈತರು ನಗದ ಪ್ರಮುಖ ಮಾರುಕಟ್ಟೆ ಪ್ರದೇಶದಲ್ಲಿ ಪ್ರತಿಭಟಣಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದರು. ಆದರೆ, ಇದಕ್ಕೆ ಒಪ್ಪದ ಪೊಲೀಸರು ಬೆಳಗಾವಿ ಕೋಟೆ ಕೆರೆ ಕಿಲ್ಲಾ ಬಳಿಯ ಅಶೋಕ ವೃತ್ತದಿಂದ ಸಂಗೊಳ್ಳಿರಾಯಣ್ಣ ವೃತ್ತದ ಮಾರ್ಗವಾಗಿ ಡಿ.ಸಿ.ಕಚೇರಿಯವರೆಗೆ ಮೆರವಣಿಗೆಗೆ ಅನುಮತಿ ನೀಡಿದ್ದಾರೆ.

ಪೊಲೀಸರು ಸೂಚಿಸಿದ ಮಾರ್ಗ ಬಿಟ್ಟು ಬೇರೆ ಕಡೆ ಪ್ರತಿಭಟನೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರತಿಭಟನಾ ನಿರತ ರೈತರಿಗೆ ಕಮೀಷನರ್ ಎಚ್ಚರಿಕೆ ನೀಡಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

police commissioner Farmers ಡಿ.ಸಿ.ಕಚೇರಿ ಮೆರವಣಿಗೆ