ನ್ಯಾಯಕ್ಕಾಗಿ ಸಿಮೆಂಟ್ ಫ್ಯಾಕ್ಟರಿ ಮುಂದೆ ಕಾರ್ಮಿಕರ ಧರಣಿ


03-08-2018 361

ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಕೋಡ್ಲಾ ಬಳಿಯಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಆರು ಜನ ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಕುರಿತಂತೆ, ಮೃತರ ಕುಟುಂಬಕ್ಕೆ ಮತ್ತು ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸಿಮೆಂಟ್ ಕಾರ್ಖಾನೆ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಕೆಲಸ‌ ಸ್ಥಗಿತಗೊಳಿಸಿದ್ದು ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ, ಅವರ ಬಗ್ಗೆ ಮಾಹಿತಿ ನೀಡತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಫ್ಯಾಕ್ಟರಿಯಿಂದ ಸರಿಯಾದ ಮಾಹಿತಿ ಸಿಗದೇ ಇರುವದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ನೂರಾರು ಕಾರ್ಮಿಕರು ಪ್ರತಿಭಟಿಸಿದ್ದಾರೆ.

 

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

cement factory ಪರಿಹಾರ ನ್ಯಾಯ