ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ


08-08-2018 336

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರಾಜ್ಯದ ಮಾಜಿ ಸಚಿವ ತಿಪ್ಪೇಸ್ವಾಮಿ ಬೆಂಗಳೂರಿನಲ್ಲಿಂದು ನಿಧನ ಹೊಂದಿದ್ದಾರೆ. ಅವರಿಗೆ 76ವರ್ಷ ವಯಸ್ಸಾಗಿತ್ತು.

ಬಹು ಅಂಗಾಂಗ ವೈಫಲ್ಯ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಹೆಚ್.ಡಿ.ದೇವೇಗೌಡ ಮತ್ತು ಜೆ.ಎಚ್.ಪಟೇಲ್ ಸರ್ಕಾರಗಳಲ್ಲಿ ಅವರು ಸಚಿವರಾಗಿ ಸೇವೆ ಸಲ್ಲಿಸಿದ್ದರು.

ರಾಜ್ಯ ಸರ್ಕಾರ 2017ರಲ್ಲಿ ತಿಪ್ಪೇಸ್ವಾಮಿ ಅವರಿಗೆ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು. ತಿಪ್ಪೇಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಿಪ್ಪೇಸ್ವಾಮಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾಳಪ್ಪನ ಹಟ್ಟಿಯಲ್ಲಿ ಸಂಜೆ ನೆರವೇರಿತು.


ಒಂದು ಕಮೆಂಟನ್ನು ಬಿಡಿ