ನೀತಿ ಸಂಹಿತೆ ಜಾರಿಯಲ್ಲಿದ್ದರೂ ವರ್ಗಾವಣೆ ದಂಧೆ ನಿಂತಿಲ್ಲ: ಈಶ್ವರಪ್ಪ


11-08-2018 332

ಮೈಸೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿ ಮುಖಂಡ ಹಾಗು ಶಿವಮೊಗ್ಗ ನಗರ ಶಾಸಕ ಕೆ.ಎಸ್.ಈಶ್ವರಪ್ಪ ಮೊನ್ನೆಯಷ್ಟೇ ‘ವರ್ಗಾವಣೆ ಎಂಬುದು ದಂಧೆ, ಮಂತ್ರಿಗಳು ವರ್ಗಾವಣೆಯ ಏಜೆಂಟುಗಳಾಗಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಇಂದೂ ಕೂಡ ವರ್ಗಾವಣೆ ಬಗ್ಗೆ ಗರಂ ಆಗಿದ್ದಾರೆ.  

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಚುನಾವಣೆ ಆಯೋಗ ನೀತಿ ಸಂಹಿತೆ ಜಾರಿ ಮಾಡಿದ್ದರೂ ವರ್ಗಾವಣೆ ದಂಧೆ ನಿಂತಿಲ್ಲ. ರಾಜ್ಯದ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ವೆ? ಎಂದು ಪ್ರಶ್ನಿಸಿದ್ದಾರೆ.  ಚುನಾವಣಾ ಆಯೋಗ ಇದರ ಬಗ್ಗೆ ಕ್ರಮ ಜರುಗಿಸಬೇಕು. ಈ ಸಂಬಂಧ ನಾನು ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ