ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ!


16-08-2018 235

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಏಮ್ಸ್ ನ ವೈದ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್‌) ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಕಳೆದ 24 ಗಂಟೆಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನಿನ್ನೆ ಅಟಲ್ ಬಿಹಾರಿ ಅವರ ಆರೋಗ್ಯದ ಬಗ್ಗೆ ವೈದ್ಯರು ಪ್ರಕಟಣೆ ಹೊರಡಿಸಿದ ನಂತರ ಸುಮಾರು 7.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ನಿರ್ದೇಶಕ ರಾಮ್‌ದೀಪ್‌ ಗುಲೇರಿಯಾ ಅವರಿಂದ ಮಾಹಿತಿ ಪಡೆದಿದ್ದರು.

ಇಂದು ಬೆಳಿಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಅವರಿಗೆ ಏಮ್ಸ್‌ ನಲ್ಲಿ ಜೂನ್‌ 11ರಿಂದ ಚಿಕಿತ್ಸೆ ನೀಡಲಾಗುತ್ತಿದೆ.


ಒಂದು ಕಮೆಂಟನ್ನು ಬಿಡಿ