‘ಕೈ’ ಶಾಸಕರಿಗೆ ಲಂಚದ ಆಮಿಷ-ಎಸಿಬಿಗೆ ದೂರು: ಡಿಸಿಎಂ


14-09-2018 310

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಯಾವುದೇ ಅಸಮಾಧಾನವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಶಾಸಕರಿಗೆ ಲಂಚದ ಅಮಿಷವೊಡ್ಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಧ್ಯಮಗಳ ವರದಿ ಆಧಾರದಲ್ಲಿ ಆದಾಯ ತೆರಿಗೆ ಇಲಾಖೆ ಹಾಗೂ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ರಾಜಕಾರಣ ಆಂತರಿಕವಾದದ್ದು. ಡಿ.ಕೆ.ಶಿವಕುಮಾರ್ ನೀರಾವರಿ ಸಚಿವರಾಗಿರುವುದರಿಂದ ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಾರೆ ಇದನ್ನು ಹಸ್ತಕ್ಷೇಪ ಎನ್ನಲು ಸಾಧ್ಯವಿಲ್ಲ ಎಂದರು. ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಲ್ಲಿದೆ. ಯಾರನ್ನೂ ಮಂತ್ರಿ ಮಾಡಬೇಕು, ಯಾವ ಸಮುದಾಯಕ್ಕೆ ಕೊಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸದಿಂದ ವಾಪಸ್ ಬಂದ ನಂತರ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

G.parameshwara ACB ಆಂತರಿಕ ಭ್ರಷ್ಟಾಚಾರ