ಶಾಸಕ ಸಿ.ಎಂ.ನಿಂಬಣ್ಣವರರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ


15-09-2018 486

ಧಾರವಾಡ: ಕಲಘಟಗಿ ಬಿಜೆಪಿ ಶಾಸಕ ಸಿ.ಎಂ.ನಿಂಬಣ್ಣವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಸ್ವಸ್ಥಗೊಂಡಿರುವ ಶಾಸಕ ನಿಂಬಣ್ಣವರಿಗೆ ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಟಲು ನೋವಿನಿಂದ ಬಳಲುತ್ತಿರುವ ಅವರಿಗೆ ಕಿಮ್ಸ್ ಆಸ್ಪತ್ರೆಯ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಸಚಿವ ಸಂತೋಷ ಲಾಡ್ ವಿರುದ್ಧ 3 ಬಾರಿ ಸೋತಿದ್ದ ಸಿ.ಎಂ.ನಿಂಬಣ್ಣವರ. 3ನೇ ಬಾರಿಗೆ ಸಂತೋಷ ಲಾಡ್ ಮಣಿಸಿ ಈ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

C.M.Nimbannavar Kims ಸಂತೋಷ ಲಾಡ್ ಹುಬ್ಬಳ್ಳಿ