ಭದ್ರತೆ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ!


17-09-2018 247

ಕಲಬುರಗಿ: ಇಂದು ಹೈದರಾಬಾದ್ ಕರ್ನಾಟಕ ವಿಮೋಚನೆಯ 70ನೇ ವರ್ಷಾಚರಣೆ ಹಿನ್ನೆಲೆ, ಕಲಬುರಗಿಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗಮಿಸಿದ್ದು, ನಗರದ ಸರದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿರುವ ವಲ್ಲಭ ಭಾಯಿ ಪಟೇಲರ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

ಇದಾದ ಬಳಿಕ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಧ್ವಜಾರೋಹಣ ನೆರವೇರಿಸಿದರು. ಆದರೆ ಸಿಎಂ ಕುಮಾರಸ್ವಾಮಿಯವರ ಈ ಎಲ್ಲಾ ಕಾರ್ಯಕ್ರಮಗಳ ಹಿನ್ನೆಲೆ, ಕಲಬುರಗಿ ನಗರದಾದ್ಯಂತ ಪೊಲೀಸರು ಭಾರಿ ಭದ್ರತೆ ಕೈಗೊಂಡಿದ್ದರು. ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಇವೆಲ್ಲದರ ಕಾರಣ ತೀವ್ರ ತೊಂದರೆ ಉಂಟಾಗಿದ್ದು ಮಾತ್ರ ಸಾರ್ವಜನಿಕರಿಗೆ.

ಪಟೇಲ್ ವೃತ್ತ ಬಳಿ ಪಾದಾಚಾರಿಗಳ ಪ್ರವೇಶಕ್ಕೂ ಪೊಲೀಸರು ನಿರ್ಬಂಧ ಹೇರಿದ್ದರು. ಆದ ಕಾರಣ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಗುರಿಯಾದರು. ಭದ್ರತೆ ನೆಪದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ್ದು, ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Hyderabad-Karnataka H.D.Kumaraswamy ಸಂಕಷ್ಟ ನಿರ್ಬಂಧ