ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳ ಪ್ರತಿಭಟನೆ


18-09-2018 192

ಬಾಗಲಕೋಟೆ: ಶಿಕ್ಷಕರ ಕೊರತೆಯಿಂದ ಸರಿಯಾಗಿ ತರಗತಿಗಳಿಲ್ಲದೆ-ಪಾಠಗಳಿಲ್ಲದೆ ಬೇಸತ್ತಿರುವ ವಿದ್ಯಾರ್ಥಿಗಳು, ಶಾಲೆಗೆ ಬೀಗ ಜಡಿದು, ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಆರು ತಿಂಗಳಿಂದ ಶಿಕ್ಷಕರ ಕೊರತೆ ಎದುರಿಸುತ್ತಿದ್ದು, ಅನೇಕ ಬಾರಿ ಮನವಿ ಸಲ್ಲಿಸಿದರೂ ಶಿಕ್ಷಕರನ್ನು ನೇಮಿಸದ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಜವಾಬ್ದಾರಿ ತೋರಿದೆ ಎಂದು ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ವಿದ್ಯಾರ್ಥಿಗಳು. ಈ ಕೂಡಲೆ ಗಣಿತ ಮತ್ತು ಇಂಗ್ಲೀಷ್ ವಿಷಯಗಳಿಗೆ ಶಿಕ್ಷಕರ ನೇಮಿಸುವಂತೆ ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

students Highschool ವಿದ್ಯಾರ್ಥಿ ಇಂಗ್ಲೀಷ್