ಡಿಸಿ ಕಚೇರಿ ಎದುರೇ ಸ್ನಾನ: ವಿದ್ಯಾರ್ಥಿಗಳ ವಿಭಿನ್ನ ಪ್ರತಿಭಟನೆ


18-09-2018 239

ಧಾರವಾಡ: ರಾಜ್ಯ ಸರ್ಕಾರದ ಸುತ್ತೋಲೆಯಿಂದ ವಸತಿ ಶಾಲೆಗಳ ಪ್ರವೇಶ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಮತ್ತು ಮಕ್ಕಳು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ಜನಜಾಗೃತಿ ಸಂಘದ ವತಿಯಿಂದ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸ್ನಾನ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ವಸತಿ ನಿಲಯದ ವಿದ್ಯಾರ್ಥಿಗಳ ಪ್ರವೇಶ, ವಿದ್ಯಾರ್ಥಿ ವೇತನ ಸೇರಿದಂತೆ ಉಚಿತ ಸೌಲಭ್ಯಗಳನ್ನು ನೀಡಿದ್ದರು. ಆದರೆ ಈಗಿನ ಸರ್ಕಾರ ಆ ಸೌಲಭ್ಯಗಳನ್ನು ಕಡಿತಗೊಳಿಸಿದೆ ಎಂದು ಪ್ರತಿಭಟನಾಕಾರರು ದೂರಿದರು.

ಈಗಾಗಲೇ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ಇದರ ಅತಂತ್ರ ಸ್ಥಿತಿಯಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಶೀಘ್ರದಲ್ಲಿ ಕಾಂಗ್ರೆಸ್ ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳ ಪ್ರವೇಶ ನೀಡಿ ಅವಕಾಶ ಮಾಡಿಕೊಡಬೇಕು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

District collector SC/ST ಜನಜಾಗೃತಿ ಅತಂತ್ರ