ಬಜೆಟ್ ವೇಳೆ ಅವಿಶ್ವಾಸ ಮಂಡಿಸಿದರೇ ಎದುರಿಸಲು ಸಿದ್ಧ


01-02-2019 228

ಬಜೆಟ್ ಅಧಿವೇಶನ ಸಂದರ್ಭದಲ್ಲಿ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸದರೆ ಅದನ್ನು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸರ್ಕಾರ ಉರುಳಿಸಲು ಬಿಜೆಪಿ ಬಿಜೆಪಿಯವರು ತಂತ್ರ ರೂಪಿಸಿದ್ದು, ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿರುವ ಬಗೆಗಿನ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೆ ಮಾಡಲಿ. ಎರಡೂ ಪಕ್ಷಗಳೂ ಸೇರಿ ಸದನದಲ್ಲಿ ಸರ್ಕಾರಕ್ಕಿರುವ ಬಹುಮತ ನಿರೂಪಿಸುತ್ತೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜೆ.ಡಿ.ಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, ಎರಡೂ ಪಕ್ಷಗಳ ಸಿದ್ಧಾಂತ ವಿಭಿನ್ನವಾಗಿದೆ. ಹಾಗಾಗಿ ಎರಡೂ ಪಕ್ಷಗಳ ಹೊಂದಾಣಿಕೆಯಲ್ಲಿ ಕೆಲವು ಸಮಸ್ಯೆಗಳಿರುತ್ತವೆ ಎಂದು ಪರಮೇಶ್ವರ್ ಹೇಳಿದರು.

ಮೈತ್ರಿ ಸರ್ಕಾರ ಎಂದರೆ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಸಮನ್ವಯ ಸಮಿತಿ ಸಭೆ ಸಮಸ್ಯೆಗಳನ್ನು ಪರಿಹರಿಸಲಿದ್ದು, ಸಭೆಯಲ್ಲಿ  ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರ ದೊರೆಯಲಿದೆ ಎಂದರು.

ಮೈಸೂರು ಭಾಗದ ಲೋಕಸಭೆ ಕ್ಷೇತ್ರಗಳನ್ನು ಜೆಡಿಎಸ್ ಗೆ  ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್ ಜೊತೆ ಯಾವುದೇ ಚರ್ಚೆ ಮಾಡಿಲ್ಲ. ಈ ಬಗ್ಗೆ ಕಳೆದ  ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಶೀಘ್ರದಲ್ಲಿಯೇ  ಯಾವ ಕ್ಷೇತ್ರ, ಎಷ್ಟು ಕ್ಷೇತ್ರಗಳನ್ನು ಮೈತ್ರಿಕೂಟಕ್ಕೆ ನೀಡಬೇಕು ಎನ್ನುವ ಕುರಿತು ಚರ್ಚಿಸಲಾಗುವುದು. ಫೆ.6 ರಂದು ಜಂಟಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಉದ್ದೇಶಿಸಿದ್ದು,  ಈ ಸಭೆ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

#Karnataka #Feb-8 #Aviswas #Budget