ಬಿಜೆಪಿಯಿಂದ ರಾಜ್ಯಪಾಲರಿಗೆ ದೂರು


14-02-2019 271

ಹಾಸನ ಶಾಸಕ ಪ್ರೀತಂಗೌಡ ಕುಟುಂಬದ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಸರಿಯಾದ ಕ್ರಮದಲ್ಲಿ ಎಫ್ಐಆರ್ ದಾಖಲಿಸದೇ ಬಿಜೆಪಿ ಕಾರ್ಯಕರ್ತರ ವಿರುದ್ಧವೇ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತಗೊಂಡಿರುವ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ದೂರು ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.


ಜೆಡಿಎಸ್ ಕಾರ್ಯಕರ್ತರ ದಾಂಧಲೆ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ನಿದರ್ಶನವಾಗಿದ್ದು ಈ ಸಂಬಂಧ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವುದಾಗಿ ತಿಳಿಸಿದರು.

 ಹಾಸನದಲ್ಲಿ ಶಾಸಕ ಪ್ರೀತಂಗೌಡ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ,ಕಲ್ಲು ತೂರಾಟ ಮಾಡಲಾಗಿದೆ. ಪ್ರೀತಂಗೌಡ ತಂದೆ, ತಾಯಿಗೆ ಅವಾಚ್ಯ ಶಬ್ಧ ಬಳಸಿ ನಿಂದನೆ ಮಾಡಿದ್ದಾರೆ, ಮಗನೊಂದಿಗೆ ಹಾಸನ ಖಾಲಿ ಮಾಡಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.ಈ ಘಟನೆಯಲ್ಲಿ ನಮ್ಮ ಯುವ ಮೋರ್ಚಾ ಕಾರ್ಯಕರ್ತ ರಾಹುಲ್ ಕಿಣಿ ಗಾಯಗೊಂಡಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಎಲ್ಲಾ ಘಟನೆಯ ವಿವರವನ್ನು ರಾಜ್ಯಪಾಲರಿಗೆ ನೀಡಿದರು.

ಹಲ್ಲೆ ನಡೆಸಿ ನಿಮ್ಮನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿರುವ ಕುರಿತು ನೀಡಿದ್ದ ದೂರು ಸಂಬಂಧ ಸಣ್ಣ ಪುಟ್ಟ ಸೆಕ್ಷನ್ ಗಳನ್ನು ಹಾಕಿ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಇನ್ನೊಂದು ಸುಳ್ಳು ದಾರನ್ನು ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಿಸಿಕೊಂಡಿದ್ದಾರೆ, ಹೆಣ್ಣು‌ಮಗಳಿಗೆ ಕುರಿಕುಳ ನೀಡಿದ ಸುಳ್ಳು ಆರೋಪದ ಮೇಲೆ ನಮ್ಮ ಕಾರ್ಯಕರ್ತರ ಮೇಲೆ ಜಾಮೀನು ರಹಿತ ಸೆಕ್ಷನ್ ಹಾಕಿ ಎಫ್ಐಆರ್ ದಾಖಲಿಸಿದ್ದಾರೆ. ನಾನು ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ ಎಂದು ಸದನದಲ್ಲಿ‌ ಮುಖ್ಯಮಂತ್ರಿ ಹೇಳಿದ್ದರು. ಆದರೆ ಹಾಸನ ಕೈ ಬಿಟ್ಟು‌ಹೋಗಲಿದೆ ಎನ್ನುವ ಆತಂಕದಲ್ಲಿ ಸುಳ್ಳುದೂರು ಹಾಕಿಸಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿದರು.

ಇಂದು ರಾಜ್ಯಪಾಲರಿಗೆ ದೂರು ನೀಡಿದ್ದು ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ
ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಗ್ರ ಘಟನಾವಳಿ, ಧಮಕಿ,ಬೆದರಿಕೆ ಹಾಕಿದ್ದು,ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು, ತೊಘಲಕ್ ದರ್ಬಾರ್ ನಡೆಯುತ್ತಿರುವ ಬಗ್ಗೆ ಗಮನಕ್ಕೆ ತರಲಿದ್ದೇವೆ ಎಂದರು.

ನಿನ್ನೆ ಕಲಾಪದಲ್ಲಿ ಹಾಸನ ಶಾಸಕರ ನಿವಾಸದ ಮೇಲೆ ನಡೆದ ದಾಳಿ ಘಟನೆ ಪ್ರಸ್ತಾಪಕ್ಕೆ ಸ್ಪೀಕರ್ ಅವಕಾಶ ನೀಡಲಿಲ್ಲ‌ ಎಂದು ಯಡಿಯೂರಪ್ಪ ಆಪಾದಿಸಿದರು.ಸಿಎಂ ಗೂಂಡಾಗಿರಿ ವಿರೋಧಿಸಿ ರಾಜ್ಯಾದ್ಯಂತ ಮುಂದಿನ ಹೋರಾಟದ ರೂಪುರೇಷುಗಳನ್ನು ಶಾಸಕಾಂಗ ಸಭೆ ಕರೆದು ನಿರ್ಧರಿಸುತ್ತೇವೆ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

#Karnataka # Complaint #Bjp #Governor