ಕಾಶ್ಮೀರಿ ವಿದ್ಯಾರ್ಥಿಗಳ ಭದ್ರತೆಗೆ ಸುಪ್ರೀಂಕೋರ್ಟ್ ಸೂಚನೆ 


22-02-2019 331

ಪುಲ್ವಾಮಾ ದಾಳಿ ಬಳಿಕ ಭಾರತದಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಅಲ್ಲಲ್ಲಿ ಹಲ್ಲೆ ನಡೆಯುತ್ತಿರುವ ಘಟನೆಗಳು ಕೇಳಿಬರುತ್ತಿದೆ. ಈ ಹಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು 11 ರಾಜ್ಯಗಳಿಗೆ ಸೂಕ್ತ ಭದ್ರತೆ ನೀಡುವಂತೆ ಆದೇಶಿಸಿ ನೊಟೀಸ್ ಜಾರಿ ಮಾಡಿದೆ. 

ಪಂಜಾಬ್, ಉತ್ತರಾಖಂಡ, ಬಿಹಾರ,ಉತ್ತರ ಪ್ರದೇಶ, ಹರಿಯಾಣ, ಮೇಘಾಲಯ, ಚತ್ತಿಸಘಡ, ಪಶ್ಚಿಮಬಂಗಾಳ, ದೆಹಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೂ  ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ಈ ರಾಜ್ಯ ಸರ್ಕಾರಗಳು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.

ಅಲ್ಲದೆ ತಮ್ಮ ರಾಜ್ಯದಲ್ಲಿ ವಾಸವಾಗಿರುವ ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆ ನೀಡಬೇಕು. ನೀಡಿರುವ ಭದ್ರತೆಯ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ಭಯಮುಕ್ತ ವಾತಾವರಣ  ಕಲ್ಪಿಸಬೇಕು ಎಂದು ನ್ಯಾಯಾಲಯ ಹೇಳಿದೆ. 

ಪುಲ್ವಾಮಾ ಘಟನೆ ಬಳಿಕ ದೇಶದ ಹಲವೆಡೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿತ್ತು. ಇನ್ನು ಹಲವೆಡೆ ದೇಶದ್ರೋಹಿ ಆರೋಪದ ಮೇರೆಗೆ ಕೆಲ ವಿದ್ಯಾರ್ಥಿಗಳನ್ನು ಕಾಲೇಜು, ಹಾಸ್ಟೆಲ್ ಹಾಗೂ ಮನೆಗಳಿಂದ ಹೊರಹಾಕಲಾಗಿತ್ತು. ಹೀಗಾಗಿ ಸುಪ್ರೀಂಕೋರ್ಟ್ ಈ ವಿದ್ಯಾರ್ಥಿಗಳಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದಿದೆ. 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

#Supreem Court #Sequirty #Kashmiri Student #India