ಉಮೇಶ ಜಾಧವ್ ರಾಜೀನಾಮೆ ಅಂಗೀಕರಿಸದಿರಲು ಕಾಂಗ್ರೆಸ್ ಮನವಿ


21-03-2019 331

ಕಾಂಗ್ರೆಸ್ ನಿಂದ ಆಯ್ಕೆಯಾಗಿ ಶಾಸಕ ಸ್ಥಾನಕ್ಕೆ ಉಮೇಶರ್ ಜಾಧವ್ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಕಾಂಗ್ರೆಸ್ ನಿಯೋಗ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಪಿ.ಆರ್. ರಮೇಶ್ ಅವರನ್ನೊಳಗೊಂಡ ನಿಯೋಗ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಉಮೇಶ್ ಜಾಧವ್ ಸಲ್ಲಿಸಿರುವ ರಾಜೀನಾಮೆಅಂಗೀಕರಿಸುವ ಮೊದಲು ಕಾಂಗ್ರೆಸ್ ಪಕ್ಷ ನೀಡಿರುವ ದೂರು ಇತ್ಯರ್ಥಗೊಳಿಸಬೇಕು.ದೂರು ಇತ್ಯರ್ಥಗೊಳ್ಳದೇ ರಾಜೀನಾಮೆಅಂಗೀಕರಿಸುವುದು ಸೂಕ್ತವಲ್ಲ. ಈ ಮೂಲಕ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕೆಂದು ಕೋರಿದೆ.

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಇದೀಗ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರಕ್ಕೆ ಕಾಂಗ್ರೆಸ್ ತಕರಾರು ತೆಗೆದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

#Speaker #Umesh Jhadav #Congress #Resgine