ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ: ಕಮಲ್ ಹಾಸನ್


13-05-2019 208

ಚೆನ್ನೈ: ಮಹಾತ್ಮ ಗಾಂಧಿಯವರನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊಟ್ಟ ಮೊದಲ ಭಯೋತ್ಪಾದಕ ಎಂದು ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. ಚೆನ್ನೈನ ಅವರಕುರಿಚಿ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಅಭ್ಯರ್ಥಿ ಪರ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಗೋಡ್ಸೆ ಕುರಿತ ನನ್ನ ಹೇಳಿಕೆ, ಅವರಕುರಿಚಿ ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವ ಮುಸ್ಲಿಮರ ಓಲೈಕೆಗಾಗಿ ಅಲ್ಲ ಎಂದು ಸ್ಪಷ್ಟೀಕರಣವನ್ನೂ ನೀಡಿದರು.

ಇಲ್ಲಿ ಮುಸ್ಲಿಮರು ಇದ್ದಾರೆ ಎಂದು ನಾನು ಈ ಹೇಳಿಕೆ ನೀಡಿಲ್ಲ. ನಾನು ಗಾಂಧಿ ಪ್ರತಿಮೆಯ ಮುಂದೆ ಈ ಹೇಳಿಕೆ ನೀಡಿದ್ದೇನೆ. ಸ್ವತಂತ್ರ ಭಾರತದ ಮೊಟ್ಟ ಮೊದಲ ಭಯೋತ್ಪಾದಕ ಹಿಂದು. ಅವನ ಹೆಸರೇ ನಾಥೂರಾಮ್ ಗೋಡ್ಸೆ ಎಂದು ಅವರು ಹೇಳಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Nathuram Godse Gandhiji Kamal Haasan Chennai