ಅಕ್ರಮ ಆಸ್ತಿ ಗಳಿಕೆ ಆರೋಪ: ಮುಲಾಯಂ, ಅಖಿಲೇಶ್ಗೆ ಕ್ಲೀನ್ ಚಿಟ್


21-05-2019 164

ಉತ್ತರಪ್ರದೇಶದ ಮಾಜಿ ಸಿಎಂಗಳಾದ ಮುಲಾಯಂ ಸಿಂಗ್ ಯಾದವ್ ಮತ್ತು ಪುತ್ರ ಅಖಿಲೇಶ್ ಯಾದವ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಇವರ ವಿರುದ್ಧ ಕೇಳಿಬಂದಿತ್ತು. ಆರೋಪದ ಕುರಿತು ತನಿಖೆ ನಡೆಸಿದ ಸಿಬಿಐ, ಇಂದು ಸುಪ್ರೀಂ ಕೋರ್ಟ್‍ನಲ್ಲಿ ಪ್ರಮಾಣ ಪತ್ರ ಸಲ್ಲಿಸಿದ್ದು, ಮುಲಾಯಂ ಮತ್ತು ಅಖಿಲೇಶ್‍ ವಿರುದ್ಧ ಸಲ್ಲಿಕೆಯಾಗಿದ್ದ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ. ಜೊತೆಗೆ, ಅಪ್ಪ ಮತ್ತು ಮಗನ ವಿರುದ್ಧ ಪ್ರಕರಣ ದಾಖಲಿಸಲು ಯಾವುದೇ ಸಾಕ್ಷಿಗಳು ಲಭ್ಯವಾಗಿಲ್ಲ ಎಂದು ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಹೇಳಿದೆ. ಈ ಮೂಲಕ ಸಮಾಜವಾದಿ ಪಕ್ಷದ ಇಬ್ಬರು ನಾಯಕರು ನಿರಾಳರಾಗಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Mulayam Singh Yadav CBI Akhilesh Yadav SP