ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ


10-06-2019 182

ಬೆಂಗಳೂರು: ಕನ್ನಡ ಸಿನಿಮಾ, ನಾಟಕ ಮತ್ತು ಹೋರಾಟದ ಬಹು ದೊಡ್ಡ ಕೊಂಡಿಯೊಂದು ಕಳಚಿ ಹೋಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್ ಕಾರ್ನಾಡ್ (81) ಅವರು ಇಂದು ವಿಧಿವಶರಾಗಿದ್ದಾರೆ.   ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಗಿರೀಶ್ ಕಾರ್ನಾಡ್ ಅವರು ಸೋಮವಾರ ಮುಂಜಾನೆ ಬೆಂಗಳೂರಿನ ಲಾವೆಲ್ಲಾ ರಸ್ತೆಯ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ರಘುನಾಥ್ ಮತ್ತು ಕೃಷ್ಣಾಬಾಯಿ ದಂಪತಿಗಳ ಮಗನಾಗಿ 1938ರ ಮೇ 19 ರಂದು ಮಹಾರಾಷ್ಟ್ರದ ಮಾಥೆರನ್ ನಲ್ಲಿ ಗಿರೀಶ್ ಕಾರ್ನಾಡ್ ಅವರು ಉತ್ತರ ಕನ್ನಡದ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಧಾರವಾಡದಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದರು.
ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಕಾರ್ನಾಡ್ ಅವರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ನಡೆಯಿತು. ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದರು.

ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ' ಯಯಾತಿ' ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು.

ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕ ರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ನಂತರ ಕಾರ್ನಾಡ್ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು.‌ ಕನ್ನಡ ಪರ ಹೋರಾಟಗಳಲ್ಲಿ ತೊಡಗಿಕೊಂಡ ಕಾರ್ನಾಡ್ ಪ್ರಖರ ವಿಚಾರವಾದಿಯಾಗಿದ್ದರು. ನಾನು ಅರ್ಬನ್ ನಕ್ಸಲ್ ಎಂದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಸೆಡ್ಡು ಹೊಡೆಯುವ ಮೂಲಕ ಹಲವರ ವಿರೋಧ ಕಟ್ಟಿಕೊಂಡಿದ್ದರು.
 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Girish Karnad Actor Author Drama