ಕಾರ್ನಾಡ್ ನಿಧನಕ್ಕೆ ಗಣ್ಯರ ಸಂತಾಪ


10-06-2019 141

ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಗಿರೀಶ್ ಕಾರ್ನಾಡ್ ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸಾಹಿತ್ಯ, ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅವರು ನೀಡಿರುವ ಅತ್ಯುತ್ತಮ ಕೊಡುಗೆ ಸದಾ ಕಾಲ ನೆನಪಿನಲ್ಲುಳಿಯುತ್ತದೆ ಎಂದು ಅವರು ಟ್ವೀಟ್ ಮೂಲಕ ಹೇಳಿದ್ದಾರೆ.

ಹಿರಿಯ ನಟ-ನಾಟಕಕಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ನಿಧನದ ಸುದ್ದಿಯಿಂದ ತೀವ್ರ ದುಃಖವಾಗಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಹಿರಿಯ ಸಾಹಿತಿ, ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Condolence Director Girish Karnad Author